ಇಸ್ಲಾಮಾಬಾದ್ : ಭಾರತದ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಂಗಳವಾರ ಭೂಮಿ ಕಂಪಿಸಿ ಜನತೆಯಲ್ಲಿ ಭೀತಿ ಹುಟ್ಟಿಸಿತು. ಇದರ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪವಾಗಿ 9 ಮಂದಿ ಸಾವಿಗೀಡಾಗಿದ್ದಾರೆ.
ಪಾಕಿಸ್ತಾನದಲ್ಲಿ 6.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶವು ಭೂಕಂಪನದ ಕೇಂದ್ರಬಿಂದುವಾಗಿದ್ದು, 180 ಕಿ.ಮೀ ಆಳದಲ್ಲಿ ಭೂಕಂಪ ಆಗಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ತಿಳಿಸಿದೆ.
ಇಸ್ಲಾಮಾಬಾದ್, ಪೇಶಾವರ, ಚಾರ್ಸದ್ದಾ, ಲಾಹೋರ್ ಮತ್ತು ರಾವಲ್ಪಿಂಡಿ ಸೇರಿದಂತೆ ವಿವಿಧ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅಲ್ಲದೇ ಗುಜ್ರಾನ್ವಾಲಾ, ಗುಜರಾತ್, ಸಿಯಾಲ್ಕೋಟ್, ಕೋಟ್ ಮೊಮಿನ್, ಮಧ್ ರಂಝಾ, ಚಕ್ವಾಲ್, ಕೊಹತ್ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶಗಳಲ್ಲಿಯೂ ಪ್ರಬಲ ಕಂಪನಗಳು ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.