Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಮೆರಿಕಾದ ಚುನಾವಣೆಯಲ್ಲಿ ಇತಿಹಾಸ ನಿರ್ಮಿಸಿದ್ದ ಭಾರತ ಮೂಲದ ಸುಹಾಸ್ ಸುಬ್ರಹ್ಮಣ್ಯಂ

ಅಮೆರಿಕಾದ ಚುನಾವಣೆಯಲ್ಲಿ ಇತಿಹಾಸ ನಿರ್ಮಿಸಿದ್ದ ಭಾರತ ಮೂಲದ ಸುಹಾಸ್ ಸುಬ್ರಹ್ಮಣ್ಯಂ

Sampriya

ನ್ಯೂಯಾರ್ಕ್‌ , ಬುಧವಾರ, 6 ನವೆಂಬರ್ 2024 (14:20 IST)
Photo Courtesy X
ನ್ಯೂಯಾರ್ಕ್‌: ಭಾರತ ಮೂಲದ ಸುಹಾಸ್ ಸುಬ್ರಹ್ಮಣ್ಯಂ ಅವರು ಅಮೆರಿಕ ಚುನಾವಣೆಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅವರು ವರ್ಜೀನಿಯಾದ 10ನೇ ಕಾಂಗ್ರೆಷನಲ್ ಡಿಸ್ಟಿಕ್ಟ್ ಆಯ್ಕೆಯಾಗುವ ಮೂಲಕ ಇತಿಹಾಸ ಬರೆದಿದ್ದಾರೆ.

ಇಡೀ ಪೂರ್ವ ಕರಾವಳಿಯಿಂದ ಚುನಾಯಿತರಾದ ಮೊದಲ ಭಾರತೀಯ ಅಮೆರಿಕನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಡೆಮಾಕ್ರಟಿಕ್ ಭದ್ರಕೋಟೆಯಾದ ವರ್ಜೀನಿಯಾದಿಂದ ಜನಪ್ರತಿನಿಧಿಗಳ ಸಭೆಗೆ(ಕಾಂಗ್ರೆಸ್) ಸ್ಪರ್ಧಿಸಿದ್ದ ಸುಬ್ರಮಣ್ಯಂ ಅವರು ರಿಪಬ್ಲಿಕನ್ ಪಕ್ಷದ ಮೈಕ್ ಕ್ಲಾನ್ಸಿ ಅವರನ್ನು ಸೋಲಿಸಿದ್ದಾರೆ.


ಕಾಂಗ್ರೆಸ್‌ನಲ್ಲಿ ಕಠಿಣ ಹೋರಾಟಗಳನ್ನು ನಡೆಸಲು ಮತ್ತು ಜನರ ಪರವಾಗಿ ಫಲಿತಾಂಶಗಳನ್ನು ನೀಡಲು ನನ್ನ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ವರ್ಜೀನಿಯಾದ 10ನೇ ಕಾಂಗ್ರೆಷನಲ್ ಡಿಸ್ಟಿಕ್ಟ್ ಜನರಿಗೆ ಆಭಾರಿಯಾಗಿದ್ದೇನೆ. ಈ ಕ್ಷೇತ್ರ ನನ್ನ ಮನೆ. ನಾನು ಇಲ್ಲಿಯೇ ಮದುವೆಯಾಗಿದ್ದೇನೆ ಎಂದು ಸುಬ್ರಹ್ಮಣ್ಯಂ ಹೇಳಿದ್ದಾರೆ.

ನನ್ನ ಹೆಂಡತಿ ಮಿರಾಂಡಾ ಮತ್ತು ನಾನು ಇಲ್ಲಿಯೇ ನಮ್ಮ ಹೆಣ್ಣುಮಕ್ಕಳನ್ನು ಬೆಳೆಸುತ್ತಿದ್ದೇವೆ. ಇಲ್ಲಿನ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳು ನಮ್ಮ ಕುಟುಂಬಕ್ಕೆ ವೈಯಕ್ತಿಕವಾದವುಗಳು. ಈ ಜಿಲ್ಲೆಗೆ ಸೇವೆ ಸಲ್ಲಿಸಲು ನನಗೆ ಸಿಕ್ಕ ಸದಾವಕಾಶ ಇದಾಗಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮೇಲಿನ ಸುಳ್ಳು ಆರೋಪಕ್ಕೆ ಲೋಕಾಯುಕ್ತ ಮುಂದೆ ಸತ್ಯವನ್ನೇ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ