Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿವಿ ಹೊರಗಡೆ ವಿದ್ಯಾರ್ಥಿನಿಯರ ಮೇಲೆ ತಾಲಿಬಾನ್ ದಾಳಿ

ವಿವಿ ಹೊರಗಡೆ ವಿದ್ಯಾರ್ಥಿನಿಯರ ಮೇಲೆ ತಾಲಿಬಾನ್ ದಾಳಿ
ಕಾಬೂಲ್ , ಬುಧವಾರ, 2 ನವೆಂಬರ್ 2022 (12:14 IST)
ಕಾಬೂಲ್ : ವಿದ್ಯಾರ್ಥಿನಿಯರು ಬುರ್ಖಾ ಧರಿಸಿಲ್ಲ ಅಂತ ಅಫ್ಘಾನಿಸ್ತಾನದ ವಿಶ್ವವಿದ್ಯಾಲಯಕ್ಕೆ ಪ್ರವೇಶ ನೀಡದ ತಾಲಿಬಾನ್ ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ಈ ವೇಳೆ ತಾಲಿಬಾನ್ ಅಧಿಕಾರಿಯೊಬ್ಬರು ವಿದ್ಯಾರ್ಥಿನಿಯರಿಗೆ ಥಳಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ವರದಿಗಳ ಪ್ರಕಾರ ಈ ಘಟನೆ ಈಶಾನ್ಯ ಅಫ್ಘಾನಿಸ್ತಾನದ ಬಡಾಕ್ಷನ್ ವಿಶ್ವವಿದ್ಯಾಲಯದ ಗೇಟ್ ಹೊರಗಡೆ ಭಾನುವಾರ ನಡೆದಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಹಲವು ವಿದ್ಯಾರ್ಥಿನಿಯರು ವಿವಿ ಪ್ರವೇಶಕ್ಕಾಗಿ ಗೇಟ್ ಹೊರಗಡೆ ಕಾದು ನಿಂತಿದ್ದಾರೆ.

ಈ ವೇಳೆ ತಾಲಿಬಾನ್ನ ಸರ್ಕಾರಿ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳನ್ನು ಸ್ಥಳದಿಂದ ಚದುರಿಸಲು ಚಾಟಿ ಬೀಸಿರುವುದು ಕಂಡುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿ ಮೇಲೆ ಅತ್ಯಾಚಾರವೆಸಗಿ ಗದ್ದೆಯಲ್ಲಿ ಎಸೆದ !