Publish Date: Mon, 02 Oct 2017 (12:25 IST)
Updated Date: Mon, 02 Oct 2017 (12:28 IST)
ಅಮೆರಿಕದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಲಾಸ್‌ವೇಗಾಸ್‌ನ ಬೇ ರಿಸಾರ್ಟ್ ಮತ್ತು ಕ್ಯಾಸಿನೋ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಉಗ್ರರು ಬೇ ರಿಸಾರ್ಟ್ ಮತ್ತು ಕ್ಯಾಸಿನೋ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆ ಅಲ್ಲಿದ್ದ ಜನರು ಭಯಭೀತರಾಗಿ ಚೆಲ್ಲಾಪಿಲ್ಲಿಯಾಗಿದ್ದಾರೆ. ಕೆಲವರು ನೆಲದ ಮೇಲೆ ಮಲಗಿ ಗುಂಡಿನ ದಾಳಿಯಿಂದ ರಕ್ಷಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳು ಉಗ್ರರನ್ನು ಸುತ್ತವರೆದಿದ್ದು, ಭಾರಿ ಗುಂಡಿನ ಚಕಮಕಿ ನಡೆದಿದೆ ಎಂದು ಲಾಸ್‌ವೇಗಾಸ್ ನಗರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೆಸಾರ್ಟ್‌ಗಳ ಮೇಲೆ ಐಸಿಸ್ ಉಗ್ರರು ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಉಗ್ರರಲ್ಲಿ ಕೆಲವರು ವಿದೇಶಿಯರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.