ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ಉಗ್ರರು ಇಂದು ಬಾಂಬ್ ದಾಳಿ ನಡೆಸಿದ್ದಾರೆ.
ಆದರೆ ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಕಾಬೂಲ್ ನಲ್ಲಿರುವ ಕಚೇರಿಯ ಕಿಟಿಕಿ ಗಾಜುಗಳು ಪುಡಿ ಪುಡಿಯಾಗಿದೆ. ಆದರೆ ಒಳಗಿದ್ದ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
ರಾಯಭಾರಿ ಕಚೇರಿಯ 50 ಮೀಟರ್ ದೂರದಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ. ಇದುವರೆಗೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೆ ತಾಲಿಬಾನ್ ಉಗ್ರರ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ