ಡರ್ಬಾನ್ : ಭ್ರಷ್ಟಾಚಾರದ ಕಾರಣದಿಂದ ಅಧಿಕಾರ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕದ ಮಾಜಿ ಅಧ್ಯಕ್ಷ ಜೇಕಬ್ ಝೂಮಾ ಅವರು ದೀರ್ಘ ಕಾಲದಿಂದ ಎದುರಿಸುತ್ತಿರುವ ಭ್ರಷ್ಟಾಚಾರ ವಿಚಾರಣೆಯ ಹಿನ್ನೆಲೆ ಡರ್ಬಾನ್ ನ್ಯಾಯಾಲಯಕ್ಕೆ ಹಾಜರಾಗಿ ಕಟಕಟೆಯಲ್ಲಿ ನಿಂತು ಏನೂ ಆಗಿಲ್ಲವೆಂಬಂತೆ ವರ್ತಿಸಿದರು. ಜೂನ್ 8ಕ್ಕೆ ಝೂಮಾ ವಿರುದ್ಧದ ವಿಚಾರಣೆಯ ಮುಂದಿನ ದಿನಾಂಕವನ್ನು ನ್ಯಾಯಾಲಯ ನಿಗದಿಪಡಿಸಿತು.
ಕೋರ್ಟಿನಿಂದ ಹೊರ ಬಂದ ಝೂಮಾ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ‘ನನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾದವುಗಳು' ಎಂದು ಝೂಮಾ ಆಪಾದಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ