ಬೀಜಿಂಗ್ : ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವದಂತಿ ವ್ಯಾಪಕವಾಗಿ ಹರಡುತ್ತಿದ್ದ ಬೆನ್ನಲ್ಲೇ ಅವರು ಮಂಗಳವಾರ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 16 ರಂದು ಜಿನ್ಪಿಂಗ್ ಅವರು ಸಮರ್ಕಂಡರ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಹಿಂದಿರುಗಿದ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.
ಈ ಹಿನ್ನೆಲೆ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಿ ಗೃಹಬಂಧನದಲ್ಲಿ ಇರಿಸಲಾಗಿದೆ .