ಪಾಕ್ ವಶದಲ್ಲಿರುವ ಭಾರತದ ಕುಲಭೂಷಣ್ ಜಾಧವ್ ಅವರಿಗೆ ರಾಜತಾಂತ್ರಿಕ ನೆರವು ನೀಡುವ ಬಗ್ಗೆ ಅಂತರಾಷ್ಟ್ರೀಯ ನ್ಯಾಯಾಲಯ(ಐಸಿಜೆ)ಯಾವುದೇ ಆದೇಶ ನೀಡಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ತಿಳಿಸಿದ್ದಾರೆ.
ಇಸ್ಲಾಮಾಬಾದ್ ನಲ್ಲಿ ಮಾತನಾಡಿದ ಅಜೀಜ್, ಅಂತರಾಷ್ಟ್ರೀಯ ಕೋರ್ಟ್ ನಲ್ಲಿ ಪಾಕಿಸ್ತಾನ ಮುಖಭಂಗ ಅನುಭವಿಸಿದೆ ಎಂದು ಹೇಳುವುದು ತಪ್ಪು. ಐಸಿಜೆ ಜಾಧವ್ ಗಲ್ಲು ಶಿಕ್ಷೆಗೆ ತಡೆ ನೀಡಿದೆ ಅಷ್ಟೆ. ಆದರೆ ಜಾಧವ್ ರಾಜತಾಂತ್ರಿಕ ನೆರವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ನೀಡಿಲ್ಲ ಎಂದು ಹೇಳಿದ್ದಾರೆ.
ಇನ್ನು ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಶ್ನಿಸಿ ಅವರ ತಾಯಿ ಸಲ್ಲಿಸಿರುವ ಮೇಲ್ಮನವಿಯನ್ನು ಪಾಕಿಸ್ತಾನದ ಅಧಿಕಾರಿಗಳು ಸ್ವೀಕರಿಸಿದ್ದು, ಅದನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.