ಕುಲಭೂಷಣ್ ಜಾಧವ ಗಲ್ಲು ವಿಚಾರ ಕುರಿತಂತೆ ಅಂತಾರಾಷ್ಟ್ರೀಯ ಕೋರ್ಟ್ ನಾಳೆ ತೀರ್ಪು ನೀಡಲಿದೆ.
ಪಾಕಿಸ್ತಾನದ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್‌ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಇಂಟರ್‌ನ್ಯಾಷನಲ್ ಕೋರ್ಟ್ ಫಾರ್ ಜಸ್ಟಿಸ್ ನ್ಯಾಯಮೂರ್ತಿಗಳು ತಡೆ ನೀಡಿದ್ದಾರೆ.
ನೆದರ್‌ಲ್ಯಾಂಡ್‌ನ ಹೇಗ್ ನಗರದಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತ ಮತ್ತು ಪಾಕ್ ಪರ ವಾದ ಪ್ರತಿವಾದಗಳು ಮುಕ್ತಾಯಗೊಂಡಿದ್ದರಿಂದ ನಾಳೆ ಮಧ್ಯಾಹ್ನ 3.30 ಕ್ಕೆ ತೀರ್ಪು ಹೊರಬೀಳಲಿದೆ.
ಕುಲಭೂಷಣ್ ಜಾಧವ್ ಪಾಕಿಸ್ತಾನದಲ್ಲಿ ಗೂಢಾಚಾರಿಕೆ ನಡೆಸುತ್ತಿದ್ದಾನೆ ಎಂದು ಪಾಕಿಸ್ತಾನದ ಸೇನಾಧಿಕಾರಿಗಳು ಆರೋಪಿಸಿ ಬಂಧನಕ್ಕೊಳಗಾಗಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.