ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪೌರತ್ವ ಕಾಯ್ದೆ ವಿರೋಧಿಸಿ ಭಾರತದಲ್ಲಿ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಪ್ರತಿಭಟನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಭಾರತೀಯ ಸೇನೆ ನಮ್ಮ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹಾಗೇ ಗಡಿ ಪ್ರದೇಶದಲ್ಲಿ ಕಾರ್ಯಚರಣೆ ನಡೆಸುವ ದುಸ್ಸಾಹಸಕ್ಕಿಳಿದರೆ ನಮ್ಮ ಪ್ರತ್ಯುತ್ತರ ತುಂಬ ಕಠಿಣವಾಗಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.