ವಾಷಿಂಗ್ಟನ್ : ಅಮೆರಿಕದ ದಿ ವಾಲ್ಟ್ ಡಿಸ್ನಿ ಕಂಪನಿ, ವೆಚ್ಚದಲ್ಲಿ ಉಳಿತಾಯ ಮಾಡುವ ಸಲುವಾಗಿ ಏಕಾಏಕಿ 7 ಸಾವಿರ ಉದ್ಯೋಗಿಗಳನ್ನ ವಜಾಗೊಳಿಸಲು ಮುಂದಾಗಿದೆ.
ಕಂಪನಿಗೆ ತಗಲುವ ವೆಚ್ಚ ಕಡಿಮೆ ಮಾಡಲು ಈ ನಿರ್ಧಾರ ಕೈಗೊಂಡಿದೆ. ವಿಶ್ವದ ದೈತ್ಯ ಟೆಕ್ ಕಂಪನಿಗಳಲ್ಲಿ ಸರಣಿಯಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಡಿಸ್ನಿ ಕೂಡಾ ಈ ನಿರ್ಧಾರ ಕೈಗೊಂಡಿದೆ.
2022ರ ನವೆಂಬರ್ನಲ್ಲಿ ಮಾಜಿ ಸಿಇಒ ಬಾಬ್ ಚಾಪೆಕ್ ಅವರಿಂದ ರಾಬರ್ಟ್ ಇಗರ್ ಅವರು ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಂತರ ಕಂಪನಿಯ ಆರ್ಥಿಕ ವೆಚ್ಚ ಕಡಿತಗೊಳಿಸಲು ನಿರ್ಧರಿಸಿದ್ದು, ಅದಕ್ಕಾಗಿ ಉದ್ಯೋಗಿಗಳನ್ನ ಕಡಿತಗೊಳಿಸಲು ಮುಂದಾಗಿದ್ದಾರೆ.