ವಿಶ್ವಸಂಸ್ಥೆ: ಕತುವಾ ಜಿಲ್ಲೆಯಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಅತ್ಯಂತ ಭಯಾನಕ ಘಟನೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟರಸ್ ಹೇಳಿದ್ದಾರೆ. ಹಾಗೂ ಈ ಕೃತ್ಯ ಎಸಗಿರುವ ಅಪರಾಧಿಗಳಿಗೆ ಸರ್ಕಾರ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ಭೀಕರ ಘಟನೆಯ ಕುರಿತ ಮಾಧ್ಯಮ ವರದಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಹೀನ ಕೃತ್ಯ ಮಾಡಿದವರನ್ನು ಬಂಧಿಸಿ ಸರ್ಕಾರ ನ್ಯಾಯ ದೊರಕಿಸಿಕೊಡಲಿದೆ ಎಂಬ ಭರವಸೆ ಇರುವುದಾಗಿ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ