Webdunia - Bharat's app for daily news and videos

Install App

ಸಾಲ ಮಾಡಿ ಲಂಡನ್ ಗೆ ಓಡಿ ಹೋಗಿದ್ದ ವಿಜಯ್ ಮಲ್ಯ ಪುತ್ರ ಸಿದ್ಧಾರ್ಥನಿಗೆ ಮದ್ವೆಯಂತೆ

Krishnaveni K
ಬುಧವಾರ, 19 ಜೂನ್ 2024 (09:54 IST)
Photo Credit: Instagram
ಲಂಡನ್: ಸಾಲ ಮಾಡಿ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಪುತ್ರ, ಮಾಡೆಲ್ ಸಿದ್ಧಾರ್ಥ್ ಮಲ್ಯ ಮದುವೆಯಾಗಲಿದ್ದಾರೆ. ಲಂಡನ್ ನಲ್ಲಿ ಈ ಮದುವೆ ನಡೆಯಲಿದೆ.

ಸದ್ಯಕ್ಕೆ ವಿಜಯ್ ಮಲ್ಯ ಫ್ಯಾಮಿಲಿ ಸಮೇತ ಲಂಡನ್ ನಲ್ಲಿ ನೆಲೆಸಿದ್ದಾರೆ. ಸಿದ್ಧಾರ್ಥ ನಟನಾಗಿ, ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ಈ ಹಿಂದೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ಡೇಟಿಂಗ್ ಮಾಡಿ ಸುದ್ದಿಯಾಗಿದ್ದರು. ಇದೀಗ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜೊತೆ ಮದುವೆಯಾಗಲಿದ್ದಾರೆ.

ಈ ಬಗ್ಗೆ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗಾಗಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಿದೆ ಎನ್ನಲಾಗಿದೆ. ಇದೇ ವಾರ ಮದುವೆ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿಯಿದೆ. ಅವರು ಈ ಮಾಹಿತಿ ಹಂಚಿಕೊಳ್ಳುತ್ತಿದ್ದಂತೇ ಅನೇಕರು ಶುಭಾಶಯ ಹೇಳಿದ್ದಾರೆ.

ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ ಹುಟ್ಟಿದ್ದು ಕ್ಯಾಲಿಫೋರ್ನಿಯಾದಲ್ಲಿ . ಲಂಡನ್ ಮತ್ತು ಯುಎಇನಲ್ಲಿ ಶಿಕ್ಷಣ ಪಡೆದಿದ್ದಾರೆ. ವೆಲ್ಲಿಂಗ್ಟನ್ ಕಾಲೇಜು ಮತ್ತು ಕ್ವೀನ್ ಮ್ಯಾರಿ ವಿವಿಯಲ್ಲಿ ಪದವಿ ಪಡೆದಿದ್ದಾರೆ. ಪ್ರಾಯೋಗಿಕವಾಗಿ ನಟನಾ ತರಬೇತಿ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments