ಜೈಪುರ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ 14 ರನ್ ಗಳ ಜಯ ದಾಖಲಿಸಿ ಶುಭಾರಂಭ ಮಾಡಿದೆ.
ಈ ಪಂದ್ಯದಲ್ಲಿ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಅಬ್ಬರದ 79 ಸಿಡಿಸಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ವೇಗದ 4000 ರನ್ ಗಳ ದಾಖಲೆ ಮಾಡಿದರು. ಆದರೆ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಕೇವಲ 4 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಮಯಾಂಕ್ ಅಗರ್ವಾಲ್ ಗೇಲ್ ಗೆ ಕೆಲ ಹೊತ್ತು ಸಾಥ್ ನೀಡಿ 22 ರನ್ ಗಳಿಗೆ ನಿರ್ಗಮಿಸಿದರು. ಬಳಿಕ ಸರ್ಫ್ರಾಜ್ ಖಾನ್ 46 ರನ್ ಗಳಿಸಿ ಮೊತ್ತ ಉಬ್ಬಲು ಕಾರಣರಾದರು. ಇದರೊಂದಿಗೆ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು.
ಬಳಿಕ ಬ್ಯಾಟಿಂಗ್ ಆರಂಭಿಸಿದ ಅಜಿಂಕ್ಯಾ ರೆಹಾನೆ ನೇತೃತ್ವದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 170 ರನ್ ಗಳಿಸಲಷ್ಟೇ ಶಕ್ತವಾಯಿತು. ರಾಜಸ್ಥಾನ್ ಪರ ಜೋಸ್ ಬಟ್ಲರ್ 69, ಸಂಜು ಸ್ಯಾಮ್ಸನ್ 30 ರನ್ ಗಲಿಸಿದರು. ಸ್ಟೀವ್ ಸ್ಮಿತ್ 20 ರನ್ ಗಳಿಸಿದ್ದು ಬಿಟ್ಟರೆ ಉಳಿದೆಲ್ಲಾ ಬ್ಯಾಟ್ಸ್ ಮನ್ ಗಳು ಒಂದಂಕಿಗೆ ಪೆವಿಲಿಯನ್ ಗೆ ನಡೆದಿದ್ದರಿಂದ ರಾಜಸ್ಥಾನ ಸೋಲು ಖಚಿತವಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ