Publish Date: Wed, 07 Oct 2020 (09:45 IST)
Updated Date: Wed, 07 Oct 2020 (09:46 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಸಮಬಲರ ನಡುವಿನ ಕಾದಾಟ ಎಂದರೂ ತಪ್ಪಾಗಲಾರದು. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಇಂದು ಸೆಣಸಾಡಲಿವೆ.
ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿ ಆತ್ಮವಿಶ್ವಾಸ ಪಡೆದುಕೊಂಡಿದೆ. ಇತ್ತ ಕೆಕೆಆರ್ ಕೂಡಾ ನಾಲ್ಕು ಪಂದ್ಯಗಳ ಪೈಕಿ ಎರಡು ಗೆದ್ದುಕೊಂಡು ಅಂಕ ಪಟ್ಟಿಯಲ್ಲಿ ಇನ್ನಷ್ಟು ಸುಧಾರಣೆ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.