Publish Date: Sat, 10 Oct 2020 (09:25 IST)
Updated Date: Sat, 10 Oct 2020 (09:27 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಬಹುನಿರೀಕ್ಷಿತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಎರಡೂ ತಂಡಗಳು ಅಂಕಪಟ್ಟಿಯಲ್ಲಿ ಯಾವುದೇ ಸ್ಥಾನದಲ್ಲಿರಲಿ, ಆದರೆ ಧೋನಿ ಮತ್ತು ವಿರಾಟ್ ಕೊಹ್ಲಿ ನಡುವಿನ ಕಾಳಗ ಎಂದರೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚೇ ಇರುತ್ತದೆ. ಈಗಾಗಲೇ ಸತತ ಪಂದ್ಯಗಳನ್ನು ಗೆದ್ದುಕೊಂಡಿರುವ ಆರ್ ಸಿಬಿ ಸೋಲಿನ ಸುಳಿಯಲ್ಲಿರುವ ಚೆನ್ನೈಯನ್ನು ಸುಲಭವಾಗಿ ಮಣಿಸುವ ಆತ್ಮವಿಶ್ವಾಸದಲ್ಲಿದೆ. ಇಂದು ಸಂಜೆ 7.30 ಕ್ಕೆ ಪಂದ್ಯ ನಡೆಯಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.