Publish Date: Wed, 04 Nov 2020 (09:23 IST)
Updated Date: Wed, 04 Nov 2020 (09:33 IST)
ದುಬೈ: ಐಪಿಎಲ್ 13 ರ ಅಂತಿಮ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಹಲವು ದಿನಗಳ ನಂತರ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 4 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಸೂರ್ಯಕುಮಾರ್ ಯಾದವ್ 36 ಮತ್ತು ಇಶಾನ್ ಕಿಶನ್ 33 ರನ್ ಗಳಿಸಿ ತಂಡವನ್ನು ಆಧರಿಸಿದರು.
ಈ ಮೊತ್ತ ಬೆನ್ನತ್ತಿದ ಹೈದರಾಬಾದ್ 17.1 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 151 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು. ಅಲ್ಲದೆ, ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಯಿತು. ನಾಯಕ ಡೇವಿಡ್ ವಾರ್ನರ್ 85 ರನ್ ಗಳಿಸಿದರೆ ವೃದ್ಧಿಮಾನ್ ಸಹಾ 58 ರನ್ ಗಳಿಸಿದರು.