Publish Date: Mon, 21 Sep 2020 (09:21 IST)
Updated Date: Mon, 21 Sep 2020 (09:22 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಮೊದಲ ಪಂದ್ಯವಾಡಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಮೊದಲ ಎದುರಾಳಿಯಾಗಿದೆ.
ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ಈ ಬಾರಿಯಾದರೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕ ಆಟವಾಡಬಹುದು ಎಂಬ ವಿಶ್ವಾಸವಿದೆ. ಆರ್ ಸಿಬಿ ಪರ ಓಪನರ್ ಗಳು ಯಾರಾಗುತ್ತಾರೆ ಎಂಬುದೇ ಸದ್ಯದ ಕುತೂಹಲ. ಕನ್ನಡಿಗ ದೇವದತ್ತ್ ಪಡಿಕ್ಕಲ್ ಅವಕಾಶ ಪಡೆದರೂ ಅಚ್ಚರಿಯಿಲ್ಲ. ಅಥವಾ ಸ್ವತಃ ಕೊಹ್ಲಿಯೇ ಆರಂಭಿಕರಾಗಿ ಕಣಕ್ಕಿಳಿಯುತ್ತಾರಾ ಕಾದು ನೋಡಬೇಕಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7.30 ಕ್ಕೆ ಪ್ರಸಾರವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.