Publish Date: Mon, 28 Sep 2020 (10:58 IST)
Updated Date: Mon, 28 Sep 2020 (11:00 IST)
ದುಬೈ: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಭಾರೀ ದಾಖಲೆಯೊಂದನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
ಕೊಹ್ಲಿ ಇಂದು 85 ರನ್ ಗಳಿಸಿದರೆ ಟಿ20 ಕ್ರಿಕೆಟ್ ನಲ್ಲಿ 9000 ರನ್ ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ. ಅಲ್ಲದೆ, ಜಾಗತಿಕವಾಗಿ ಏಳನೇ ಆಟಗಾರನಾಗಲಿದ್ದಾರೆ. 13,296 ರನ್ ಗಳಿಸಿರುವ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ.