Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತನ್ನ ಎರಡನೇ ಪಂದ್ಯವಾಡಲಿದ್ದು, ಹೊಸ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಈ ಐಪಿಎಲ್ ಗೆ ಹೊಸದಾಗಿ ಸೇರ್ಪಡೆಯಾಗಿರುವ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ತಂಡ ಮೊದಲ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲು ಅನುಭವಿಸಿತ್ತು. ಮುಖ್ಯವಾಗಿ ಬ್ಯಾಟಿಂಗ್ ಕೈಕೊಟ್ಟಿದ್ದು ಲಕ್ನೋಗೆ ಮುಳುವಾಗಿತ್ತು.
ಇತ್ತ ಚೆನ್ನೈ ಕತೆಯೂ ಅದೇ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದಾಗಿ ಕೋಲ್ಕೊತ್ತಾ ವಿರುದ್ಧ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಎರಡೂ ತಂಡಗಳೂ ಮೊದಲ ಗೆಲುವಿಗಾಗಿ ಸೆಣಸಾಡಲಿವೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.