ಮುಂಬೈ: ಐಪಿಎಲ್ 2022 ಕ್ಕೆ ಚಾಲನೆ ಸಿಕ್ಕಿದ್ದು, ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ದ 6 ವಿಕೆಟ್ ಗಳ ಸೋಲು ಅನುಭವಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತು. ನಾಯಕತ್ವ ತ್ಯಜಿಸಿ ಆಟಗಾರನಾಗಿ ಕಣಕ್ಕಿಳಿದ ಧೋನಿ 38 ಎಸೆತಗಳಲ್ಲಿ 50 ರನ್ ಚಚ್ಚಿದರು.
ಈ ಮೊತ್ತ ಬೆನ್ನತ್ತಿದ ಕೆಕೆಆರ್ 18.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಕೆಕೆಆರ್ ಪರ ಆರಂಭಿಕರಾಗಿ ಕಣಕ್ಕಿಳಿದ ಅಜಿಂಕ್ಯಾ ರೆಹಾನೆ 44 ರನ್ ಗಳಿಸಿದರು. ಇದರೊಂದಿಗೆ ನಾಯಕರಾದ ಮೊದಲ ಪಂದ್ಯದಲ್ಲೇ ಜಡೇಜಾ ಸೋಲು ಕಾಣುವಂತಾಯಿತು.