ಮುಂಬೈ: ವಿರಾಟ್ ಕೊಹ್ಲಿ-ರವಿಶಾಸ್ತ್ರಿ ಕಾಲದಲ್ಲಿ ಮೂಲೆಗುಂಪಾಗಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ರೋಹಿತ್ ಶರ್ಮಾ ನಾಯಕರಾಗುತ್ತಿದ್ದಂತೇ ತಂಡಕ್ಕೆ ಪುನರಾಗಮನ ಮಾಡಿದ್ದರು.
ಇದೀಗ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಕುಲದೀಪ್ ಯಾದವ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಕಿರು ಮಾದರಿಯಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.
ಕೋಲ್ಕೊತ್ತಾ ತಂಡದ ಪರ ಕಳೆದ ಬಾರಿ ಆಡುತ್ತಿದ್ದಾಗ ಮೂಲೆಗುಂಪಾಗಿದ್ದ ಕುಲದೀಪ್ ಯಾದವ್ ಬಹಿರಂಗವಾಗಿ ಆಡಳಿತ ಮಂಡಳಿ ವಿರುದ್ಧ ಕಿಡಿ ಕಾರಿದ್ದರು. ಇದೀಗ ಡೆಲ್ಲಿಯಲ್ಲಿ ಅವರಿಗೆ ಉತ್ತಮ ಬೆಂಬಲ ಸಿಗುತ್ತಿದ್ದು, ಅದಕ್ಕೆ ತಕ್ಕಂತೆ ವಿಕೆಟ್ ಕೀಳುತ್ತಿದ್ದಾರೆ. ಹೀಗಾಗಿ ಅವರ ಸ್ಥಾನ ಭದ್ರವಾಗಿದೆ ಎಂದೇ ಹೇಳಬಹುದು.