ನವದೆಹಲಿ: ಒಂದು ಕಾಲದಲ್ಲಿ ಅಗ್ಗದ ಬೆಲೆಗೆ ಕರೆ ಒದಗಿಸಿ ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ ಏರ್ ಸೆಲ್ ಟೆಲಿಕಾಂ ಸಂಸ್ಥೆ ಮುಚ್ಚುವ ಭೀತಿಯಲ್ಲಿದೆ.
ಏರ್ ಸೆಲ್ ಸಂಸ್ಥೆ ಆರ್ಥಿಕ ಸಂಕಷ್ಟದಲ್ಲಿದ್ದು, ಹೊಸದಾಗಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿಲ್ಲ. ಅಷ್ಟೇ ಅಲ್ಲ, ಈ ಸಂಸ್ಥೆಯಲ್ಲಿ ಕೆಲಸ ಮಾಡುವ 5000 ಕ್ಕೂ ಅಧಿಕ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಈಗಾಗಲೇ ನೌಕರರಿಗೆ ಏರ್ ಸೆಲ್ ಸಂಸ್ಥೆ ಈ ಬಗ್ಗೆ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಟೆಲಿಕಾಂ ಜಗತ್ತಿನಲ್ಲಿ ಉಂಟಾಗಿರುವ ಭಾರೀ ಪೈಪೋಟಿಗೆ ತನ್ನನ್ನು ಒಡ್ಡಿಕೊಳ್ಳಲಾಗದೆ ಸಂಸ್ಥೆ ನಷ್ಟದತ್ತ ಮುಖ ಮಾಡಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ