ಬೆಂಗಳೂರು : ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗಲಾದ ಜನರಿಗೆ ಇದೀಗ ಮತ್ತೊಂದು ದರ ಏರಿಕೆಯ ಶಾಕ್ ಕಾದಿದೆ.
ಅದೇನೆಂದರೆ ಪೆಟ್ರೋಲ್, ಡೀಸೆಲ್ ದರಗಳು ಏರಿಕೆಯಾಗಿರುವ ಹಿನ್ನಲೆಯಲ್ಲಿ ಇದೀಗ ಖಾಸಗಿ ಪ್ರವಾಸಿ ಟ್ಯಾಕ್ಸಿ ಮಾಲೀಕರು ಸಹ ದರ ಏರಿಕೆ ಮಾಡಲು ಸಿದ್ಧರಾಗುತ್ತಿದ್ದು ಆ ಮೂಲಕ ಶೇ. 5 ರಿಂದ 10 ರಷ್ಟು ಏರಿಕೆಯಾಗಲಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2018-19ನೇ ಸಾಲಿನ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಏರಿಸಿದ್ದು, ಅದು ಶುಕ್ರವಾರದಿಂದ ಅನ್ವಯವಾಗಿದೆ. ಈ ದರ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಪ್ರವಾಸಿ ಟ್ಯಾಕ್ಸಿ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಖಾಸಗಿ ಟ್ಯಾಕ್ಸಿಗಳನ್ನೇ ಅವಲಂಬಿಸಿಕೊಂಡಿರುವವರಿಗೆ ಈ ದರ ಏರಿಕೆಯ ಬಿಸಿ ತಟ್ಟಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ