ನವದೆಹಲಿ : ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬ್ಯಾಂಕುಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐದು ವರ್ಷಗಳ ಆರ್ಥಿಕತೆಯ ಕುಂಠಿತವನ್ನು ಸರಿ ದಾರಿಗೆ ತಂದು, ಬೆಳೆವಣಿಗೆಯತ್ತ ಕೊಂಡೊಯ್ಯಲು ಸಣ್ಣ ಬ್ಯಾಂಕ್ ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್ ಗಳನ್ನಾಗಿ ಮಾಡಬೇಕು. ಆದ್ದರಿಂದ 10 ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ನಾಲ್ಕು ಬ್ಯಾಂಕ್ ಗಳಿಗೆ ವಿಲೀನಗೊಳಿಸಿರುವ ಕುರಿತು ಘೋಷಣೆ ಮಾಡಿದ್ದರು.
ಸರ್ಕಾರದ ಈ ನೀತಿಯನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ(ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ(ಎಐಬಿಒಎ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್(ಐಎನ್‌ಬಿಒಸಿ) ಮತ್ತು ನ್ಯಾಷನಲ್ ಆರ್ಗನೈಸೇಶನ್ ಆಫ್ ಬ್ಯಾಂಕ್ ಅಧಿಕಾರಿಗಳು(ನೊಬೊ) ಜಂಟಿಯಾಗಿ ಸೆಪ್ಟೆಂಬರ್ 26 ಮತ್ತು 27 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ ಕರೆ ನೀಡಿವೆ.