ಇನ್ಮುಂದೆ ಪ್ರಯಾಣಿಕರಿಗೆ ಕನ್ನಡ ಭಾಷೆಯಲ್ಲಿಯೇ ರೈಲು ಟಿಕೆಟ್ ಲಭ್ಯವಾಗಲಿದೆ ಎಂದು ರೈಲ್ವೆ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಪ್ರಾದೇಶಿಕ ಭಾಷೆಗಳಲ್ಲಿ ರೈಲ್ವೆ ಟಿಕೆಟ್ ಮುದ್ರಣಗೊಳಿಸುವ ಕುರಿತಂತೆ ಮುಂದಿನ ವರ್ಷ ಜನೆವರಿ 1 ರಿಂದ ನೂತನ ನಿಯಮ ಜಾರಿಗೆ ಬರಲಿದೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ವೆ ಟಿಕೆಟ್‌ನಲ್ಲಿ ಸ್ಥಳೀಯ ಭಾಷೆಯೊಂದಿಗೆ ಹಿಂದಿ ಮತ್ತು ಆಂಗ್ಲ ಭಾಷೆಯನ್ನು ಮುದ್ರಿಸಲಾಗುತ್ತಿದೆ. ಆಯಾ ರಾಜ್ಯಗಳಲ್ಲಿರುವ ಭಾಷೆಯಲ್ಲಿಯೇ ರೈಲ್ವೆ ಟಿಕೆಟ್ ಮುದ್ರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಮಂಡಳಿ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.