ನವದೆಹಲಿ: ಇಂಧನ ಉಳಿತಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಡಲಿದೆ. 2030 ರ ವೇಳೆಗೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಸಿ ಓಡುವ ಕಾರುಗಳ ಮಾರಾಟ ಇರಬಾರದು ಎಂದು ಇಂಧನ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ.
ನಾವು ‘ಉಜಾಲ’ದಂತಹ ಸ್ವಯಂ ನಿರ್ಮಿತ ಇಲೆಕ್ಟ್ರಿಕ್ ಕಾರುಗಳನ್ನು ತಯಾರಿಸಬೇಕಿದೆ. ಅದಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಿದ್ದೇವೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡುತ್ತೇವೆ.
2030 ರ ವೇಳೆಗೆ ಭಾರತದಲ್ಲಿ ಇಂಧನ ಬಳಸಿ ಓಡಿಸುವ ಕಾರುಗಳ ಮಾರಾಟವೇ ಇರಬಾರದು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಇಲೆಕ್ಟ್ರಿಕ್ ಕಾರುಗಳನ್ನು ತಲುಪಿಸಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ