Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅರ್ಧ ಬೆಲೆಗೆ ಪೌಷ್ಠಿಕಾಂಶ ಇರುವ ತೊಗರಿ ಬೇಳೆ

ಅರ್ಧ ಬೆಲೆಗೆ ಪೌಷ್ಠಿಕಾಂಶ ಇರುವ ತೊಗರಿ ಬೇಳೆ
Bangalore , ಮಂಗಳವಾರ, 31 ಜನವರಿ 2017 (13:27 IST)
ಕರ್ನಾಟಕವನ್ನು ಹಸಿವು ಮುಕ್ತ ಮಾಡಲು ನಮ್ಮ ಸರ್ಕಾರ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಉಚಿತವಾಗಿ ಆಹಾರ ಧಾನ್ಯ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
 
ಅರ್ಧಬೆಲೆಗೆ ತೊಗರಿಬೇಳೆ: ಪೌಷ್ಠಿಕಾಂಶ ಇರುವ ತೊಗರಿ ಬೇಳೆಯನ್ನು ಫಲಾನುಭವಿಗಳಿಗೆ ಅರ್ಧ ಬೆಲೆಗೆ ನೀಡಲು ತೀರ್ಮಾನಿಸಲಾಗಿದೆ. ಬಹಳಷ್ಟು ಮಂದಿ ಪೌಷ್ಟಿಕಾಂಶ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಬೇಳೆ ನೀಡಲು ನಿರ್ಧರಿಸಿದೆ. ಮಕ್ಕಳಿಗೆ ಶಾಲೆಗಳಲ್ಲಿ ಹಾಲು ಕೊಡುತ್ತಿರುವುದರಿಂದ ಪೌಷ್ಟಿಕಾಂಶ ಕೊರತೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
 
ವಿಳಂಬ ತಪ್ಪಿಸುವ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಪಡಿತರ ಚೀಟಿ ವಿತರಿಸುವ ಸೌಲಭ್ಯ ಒದಗಿಸಲಾಗುತ್ತಿದೆ. ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಹಣ ಕೊಡಬೇಡಿ. ಆಹಾರ ಧಾನ್ಯಗಳನ್ನೇ ಕೊಡಿ ಎಂದು ಆಹಾರ ಸಚಿವರಿಗೆ ಸೂಚಿಸಿದ್ದೇನೆ ಎಂದು ನುಡಿದ ಮುಖ್ಯಮಂತ್ರಿಗಳು ಅದನ್ನೇ ಮುಂದುವರಿಸಲಾಗುವುದು ಎಂದರು. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ 15 ದಿನದಲ್ಲಿ ಪಡಿತರ ಚೀಟಿ ಸಿಗಲಿದೆ. ವ್ಯವಸ್ಥೆ ಸರಳೀಕರಣ ಆಗಲಿ. ಆದರೆ ಅದರಿಂದ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಎಲ್ಲ ಅರ್ಹರಿಗೂ ಪಡಿತರ ಚೀಟಿ ಸಿಗಬೇಕು, ಯೂನಿಟ್ ಗೆ 5 ಕೆ.ಜಿ. ಪ್ರಕಾರ ಈಗ ಅಕ್ಕಿ ನೀಡಲಾಗುತ್ತಿದೆ. ಏಪ್ರಿಲ್ ಒದರಿಂದ ಅದನ್ನು ಹೆಚ್ಚಿಸಲಾಗುವುದು.ಎಂದು ಮುಖ್ಯಮಂತ್ರಿಗಳು ನುಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬರ ಅನುದಾನ ಬಳಕೆ ಕುರಿತು ಸ್ಪಷ್ಟೀಕರಣ ನೀಡಲು ಸೂಚನೆ