ನವದೆಹಲಿ: ಕೊರೋನಾ ಸಂದರ್ಭದಲ್ಲಿ ಪಾತಾಳ ತಲುಪಿದ್ದ ದೇಶದ ಆರ್ಥಿಕತೆ ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ತೆರಿಗೆ ಸಂಗ್ರಹದಲ್ಲಿ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಆದಾಯ ಹೆಚ್ಚಳವಾಗುತ್ತಿದೆ.
2020-21 ನೇ ಸಾಲಿನಲ್ಲಿ ಜಿಎಸ್ ಟಿ, ಅಟೋಮೊಬೈಲ್ ಕ್ಷೇತ್ರ, ಅಬಕಾರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ. ಜಿಎಸ್ ಟಿ ಮಾತ್ರದಿಂದ 1.23 ಲಕ್ಷ ಕೋಟಿ ಸಂಗ್ರಹವಾಗಿದೆ ಎನ್ನಲಾಗಿದೆ.
ಅದಲ್ಲದೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ ಸಂಗ್ರಹ)ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ. 27 ರಷ್ಟು ಹೆಚ್ಚು ಮೊತ್ತ ಸಂಗ್ರಹವಾಗಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಆರ್ಥಿಕತೆ ಮತ್ತೆ ಹಳಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.