ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಮುಂಚೂಣಿಯನ್ನು ಕಾಯ್ದುಕೊಳ್ಳಲು ಹಾಗೂ ಹೂಡಿಕೆಗೆ ಅತಿ ಹೆಚ್ಚಿನ ಅವಕಾಶ ಕಲ್ಪಿಸಲು ದೇವನಹಳ್ಳಿಯಲ್ಲಿ ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಹಾರ್ಡ್‍ವೇರ್ ಪಾರ್ಕ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೈಗಾರಿಕಾ ಪಾರ್ಕ್, ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ವಿಶೇಷ ವಿತ್ತ ವಲಯ, ಹುಬ್ಬಳ್ಳಿಯಲ್ಲಿ ಆರ್ಯಭಟ ಪಾರ್ಕ್ ಸ್ಥಾಪಿಸಲು ಹಾಗೂ ಖಾಸಗಿ ಸಾರ್ವಜನಿಕ ಸಹಭಾಗಿತ್ವ ಮಾದರಿಯಲ್ಲಿ ಇನ್ ಕ್ಯುಬೇಟರ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮೆಟ್ರೋ ಸೇವೆ ವಿಸ್ತರಣೆ: ನೆಟ್‍ಆಪ್ ಸಂಸ್ಥೆಯು ನಿರ್ಮಿಸಿರುವ ಪರಿಸರ ಸ್ನೇಹಿ ಕ್ಯಾಂಪಸ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅವರು ನಮ್ಮ ಸರ್ಕಾರವು ತಂತ್ರಜ್ಞಾನ ಕಂಪನಿಗಳ ಸ್ಥಾಪನೆಗೆ ಪೂರಕವಾದ ವಾತಾವರಣ ಸೃಷ್ಟಿಸುವುದಷ್ಟೇ ಅಲ್ಲ ಅವುಗಳು ಹೆಚ್ಚಿನ ಅಭಿವೃದ್ಧಿ ಸಾಧಿಸಲು ಪೂರಕವಾಗಿ ಕಾರ್ಯನಿರ್ವಹಿಸಲು ಬದ್ಧವಾಗಿದೆ ಎಂದು ಹೇಳಿದರು.
ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬೆಂಬಲ ನೀಡಲು ಸರ್ಕಾರ ಬದ್ಧವಾಗಿದ್ದು ನಮ್ಮ ಮೆಟ್ರೋ ಸೇವೆಯನ್ನು ಬೈಯಪ್ಪನಹಳ್ಳಿಯಿಂದ ವೈಟ್‍ಫೀಲ್ಡ್‍ವರೆಗೆ ವಿಸ್ತರಿಸುವ ನಮ್ಮ ಇತ್ತೀಚಿನ ಘೋಷಣೆಯು ಈ ಪ್ರದೇಶದ ಕೈಗಾರಿಕಾ ಸಂಸ್ಥೆಗಳ ಸಿಬ್ಬಂದಿಯ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಸಚಿವರುಗಳಾದ ಕೆ ಜೆ ಜಾರ್ಜ್, ಆರ್ ವಿ ದೇಶಪಾಂಡೆ ಉಪಸ್ಥಿತರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.