ಮಾರ್ಚ್ ಮೊದಲು ಅಥವಾ ಎರಡನೆ ವಾರದಲ್ಲಿ ರಾಜ್ಯದ ಆಯವ್ಯಯ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು ಮುಖ್ಯಮಂತ್ರಿಗಳು.
ಎರಡು ದಿನಗಳ ಕಾಲ ಎಲ್ಲಾ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ನಡೆಸಿ, ಸರ್ಕಾರದ ಸೌಲಭ್ಯಗಳು ಫಲಾನುಭವಿಗಳ ಮನೆಗೆ ತಲುಪಬೇಕು. ಸೌಲಭ್ಯದಿಂದ ವಂಚಿತರಾದ ಫಲಾನುಭವಿಗಳನ್ನು ಹುಡುಕಿ ಸೌಲಭ್ಯ ಕೊಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಇದೇ ವೇಳೆ ಕುಡಿಯುವ ನೀರು ಹಾಗೂ ಬರಗಾಲದ ಕುರಿತು ಸಭೆಯಲ್ಲಿ ಚರ್ಚಿಸಿದ್ದೇನೆ ಎಂದು ನುಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಉದ್ಯೋಗ ಖಾತರಿ ಯೋಜನೆ ಅತ್ಯುತ್ತಮವಾಗಿ ಅನುಷ್ಟಾನಗೊಳ್ಳುತ್ತಿದೆ. ಈ ಯೋಜನೆಯಡಿ ಹಿಂದೆ ಇದ್ದ 6 ಕೋಟಿ ಮಾನವ ದಿನಗಳನ್ನು ಈಗ 10ಕೋಟಿ ಮಾನವ ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.ಮುಖ್ಯಮಂತ್ರಿಗಳ ಜೊತೆ ಸಚಿವರಾದ ಹೆಚ್ ಸಿ ಮಹದೇವಪ್ಪ ಹಾಜರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.