Webdunia - Bharat's app for daily news and videos

Install App

ಡಿ.14ರಿಂದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ-ಮಾರಾಟ

Webdunia
ಮಂಗಳವಾರ, 13 ಡಿಸೆಂಬರ್ 2016 (11:44 IST)
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದಿಂದ ಮೈಸೂರಿನ ಸುಪ್ರಸಿದ್ಧ ಪಾರಂಪರಿಕ ಉತ್ಪನ್ನವಾದ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ನಾಲ್ಕು ದಿನಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಡಿಸೆಂಬರ್ 14ರಿಂದ 17ರವರೆಗೆ ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. 
 
ಡಿಸೆಂಬರ್ 14ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಉಜ್ವಲ್‍ಕುಮಾರ್ ಘೋಷ್ ಅವರು ಈ ಮಾರಾಟ ಮೇಳವನ್ನು ಉದ್ಘಾಟಿಸುವರು. ಪ್ರತಿದಿನ ಬೆಳಗಿನ 10 ರಿಂದ ರಾತ್ರಿ 8 ಗಂಟೆಯವರೆಗೆ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
 
ಪ್ರವಾಸಿ ಟ್ಯಾಕ್ಸಿ ಅರ್ಹತಾ ಯಾದಿ ಪ್ರಕಟ : ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಸಹಾಯಧನ ಯೋಜನೆಯಡಿ 2015-16ನೇ ಸಾಲಿನಲ್ಲಿ ಹಿಂದುಳಿದ/ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳಿಂದ ಸ್ವೀಕೃತವಾದ ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲನಾ ಸಮಿತಿ ಸಭೆಯಲ್ಲಿ ಪರಿಶೀಲಿಸಿ ಅರ್ಹತಾ ಯಾದಿ ತಯಾರಿಸಲಾಗಿದೆ. ಸದರಿ ಯಾದಿಯನ್ನು ಅಭ್ಯರ್ಥಿಗಳ ಗಮನಕ್ಕಾಗಿ ಡಿಸೆಂಬರ್ 12ರಂದು ಕಲಬುರಗಿಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫÀಲಕದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಇದನ್ನು ಗಮನಿಸಲು ಕೋರಿದೆ.
 
ಅರ್ಹತಾ ಪಟ್ಟಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ತಮ್ಮ ಯಾವುದೇ ಅಹವಾಲುಗಳಿದ್ದಲ್ಲಿ ಡಿಸೆಂಬರ್ 19ರೊಳಗಾಗಿ ಲಿಖಿತ ರೂಪದಲ್ಲಿ ಕಲಬುರಗಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments