ಚಿಕ್ಕೋಡಿ : ನಿಮ್ಮ ಅಂಗಡಿಗಳಲ್ಲಿ ನೀವು ಫೋನ್ ಪೇ, ಗೂಗಲ್ ಪೇ ಯೂಸ್ ಮಾಡ್ತಿದ್ದಿರಾ? ಹಾಗಾದ್ರೆ ಈ ಸ್ಟೋರಿನಾ ನೀವು ಮಿಸ್ ಮಾಡದೇ ನೋಡಬೇಕು.
ಫೋನ್ ಪೇ, ಗೂಗಲ್ ಪೇ ಮೂಲಕ ಹಣ ಸಂದಾಯ ಮಾಡೋರು ಹೇಗೆಲ್ಲ ಮೋಸ ಮಾಡ್ತಾರೆ ಅನ್ನೋದಕ್ಕೆ ಇಲ್ಲೊಂದು ಸ್ಪಷ್ಟ ನಿದರ್ಶನ ಸಿಕ್ಕಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಅಭರಣ ಖರೀದಿಸಿ ಬಂಗಾರದ ಅಂಗಡಿ ಮಾಲೀಕರಿಗೆ ಮಕ್ಮಲ್ ಟೋಪಿ ಹಾಕಿದ ಗ್ಯಾಂಗ್ ಒಂದು ಈಗ ಪೊಲೀಸರ ಬಲೆಗೆ ಬಿದ್ದಿದೆ.
ಡಿಜಿಟಲ್ ಇಂಡಿಯಾ ಕೇಂದ್ರ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆ. ನಗದು ವ್ಯವಹಾರವನ್ನು ಕಡಿಮೆ ಮಾಡಬೇಕು. ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಈ ಯೋಜನೆಯನ್ನ ಸರ್ಕಾರ ಜಾರಿಗೆ ತಂದಿದೆ. ಆದರೆ ಇದನ್ನೆ ದಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್ ಈಗ ಪೊಲೀಸರ ಅತಿಥಿಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್, ಹುಕ್ಕೇರಿ ಮತ್ತು ರಾಯಭಾಗ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಂದೇ ರೀತಿಯ ಪ್ರಕರಣಗಳು ವರದಿಯಾಗಿದ್ದವು. ಇದನ್ನು ಬೆನ್ನಟ್ಟಿದ ಪೊಲೀಸರು ಈಗ ಗ್ಯಾಂಗ್ನ ಪತ್ತೆ ಮಾಡಿದ್ದಾರೆ.