ರಿಲಯನ್ಸ್ ಜಿಯೋ ಜಾಹೀರಾತಿಗೆ ಪ್ರಧಾನಿ ಮೋದಿ ಭಾವಚಿತ್ರ ಬಳಸಿಕೊಂಡಿರುವ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಜಿಯೋ ಉತ್ಪನ್ನದ ಜಾಹೀರಾತಿಗೆ ಪ್ರಧಾನಿಯ ಭಾವಚಿತ್ರ ಬಳಸಲು ಪ್ರಧಾನಮಂತ್ರಿ ಕಚೇರಿ ಅನುಮತಿ ನೀಡಿರಲಿಲ್ಲ ಎಂದು ಹೇಳಿಕೆ ನೀಡಿದೆ.
ದೇಶದ ಪ್ರಧಾನಮಂತ್ರಿ ಅಥವಾ ರಾಷ್ಟ್ರಪತಿಯವರ ಭಾವಚಿತ್ರಗಳನ್ನು ಬಳಸಿಕೊಳ್ಳಲು ಖಾಸಗಿ ಕಂಪೆನಿಗಳು ಸರಕಾರದ ಅನುಮತಿ ಪಡೆಯುವುದು ಕಡ್ಡಾಯ. ಮೋದಿ ಭಾವಚಿತ್ರ ಬಳಕೆ ಕುರಿತಂತೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಸ್ಪಷ್ಟನೆ ನೀಡಬೇಕಾಗಿದೆ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ಸಂಸದ ನೀರಜ್ ಶೇಖರ್ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವ ರಾಜವರ್ಧನ್ ಸಿಂಗ್ ರಾಠೋಡ್, ರಿಲಯನ್ಸ್ ಜಿಯೋ ಸಂಸ್ಥೆ ಪ್ರಧಾನಿ ಮೋದಿಯವರ ಭಾವಚಿತ್ರ ಬಳಸಿಕೊಂಡಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಶೀಘ್ರದಲ್ಲಿ ರಿಲಯನ್ಸ್ ಕಂಪೆನಿಯ ವಿರುದ್ಧ ಕ್ರಮಕ್ಕೆ ಸರಕಾರ ಮುಂದಾಗಲಿದೆ ಎಂದು ಸಚಿವ ರಾಠೋಡ್ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.