ನವದೆಹಲಿ : ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ನೋಡಿ ಸಂತಸದಲ್ಲಿರುವ ವಾಹನಸವಾರರಿಗೊಂದು ಶಾಕಿಂಗ್ ನ್ಯೂಸ್. ಸದ್ಯದಲ್ಲೇ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಕೆ ಕಂಡುಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು. ಇತ್ತೀಚೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದ್ದ ಕಾರಣ, ಭಾರತದ ತೈಲ ಕಂಪನಿಗಳು ಅದಕ್ಕನುಗುಣವಾಗಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದವು.
ಆದರೆ ಸೋಮವಾರದಂದು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇ 4.65 ರಷ್ಟು ಏರಿಕೆಯಾಗಿದ್ದು, ಇದರಿಂದಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.
ಇನ್ನು ತೈಲ ರಪ್ತು ರಾಷ್ಟ್ರಗಳ ಒಕ್ಕೂಟದ ಸಭೆ ಈ ವಾರ ನಡೆಲಿದ್ದು, ಜಾಗತೀಕ ಮಾರುಕಟ್ಟೆ ತೈಲ ಪೂರೈಕೆಯನ್ನು ಕಡಿತಗೊಳಿಸುವ ಬಗ್ಗೆ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳವಾಗಲಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.