ನವದೆಹಲಿ : ಈಗಾಗಲೇ ಬ್ಯಾಂಕುಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 21 ಹಾಗೂ 26ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿತ್ತು. ಆದರೆ ಇದೀಗ ಮತ್ತೆ ಜನವರಿಯಲ್ಲಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರವನ್ನು ಹಮ್ಮಿಕೊಂಡಿದೆ.
ಕೆಲವು ಬಾಕಿ ಉಳಿದಿರುವ ಸಮಸ್ಯೆಗಳನ್ನು ಪ್ರತಿಭಟಿಸಿ 2019 ರ ಜನವರಿ 8 ಮತ್ತು 9 ರಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್(ಎಐಬಿಇಎ) ಬ್ಯಾಂಕ್ ಮುಷ್ಕರವನ್ನು ಹಮ್ಮಿಕೊಂಡಿದೆ ಎಂದು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.
ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ವಿಲೀನ ವಿರೋಧಿಸಿ ಹಾಗು ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ (ಎಐಬಿಇಎ) ಮತ್ತು ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ (ಬಿಎಫ್‌ಐ) ಮುಷ್ಕರ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ