ನವದೆಹಲಿ : ಅಪಘಾತ ಸಂದರ್ಭದಲ್ಲಿ ಮೂರನೇ ವ್ಯಕ್ತಿ ಮೃತಪಟ್ಟರೆ ಆತನ ಕುಟುಂಬಕ್ಕೆ ಯಾವುದೇ ಪರಿಹಾರ ಸಿಗದ ಹಿನ್ನಲೆಯಲ್ಲಿ ಇದೀಗ ಸುಪ್ರಿಂಕೋರ್ಟ್ ಮೃತರಿಗೆ ಸಹಾಯ ಮಾಡಲುಮುಂದಾಗಿದೆ.
ಅದಕ್ಕಾಗಿ ದ್ವಿಚಕ್ರ ಸೇರಿದಂತೆ ಎಲ್ಲಾ ವಾಹನಗಳಿಗೂ ಥರ್ಡ್ ಪಾರ್ಟಿ ವಿಮೆ ಕಡ್ಡಾಯ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ರಸ್ತೆ ಅಪಘಾತದಲ್ಲಿ ವರ್ಷಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರು ಮೃತರಾಗುತ್ತಿದ್ದಾರೆ ಎಂದು ಸಮಿತಿ ವರದಿಯನ್ನು ಆಧಾರಿಸಿ ಸುಪ್ರೀಂಕೋರ್ಟ್ ಈ ಆದೇಶವನ್ನು ನೀಡಿದೆ ಎಂದು ತಿಳಿದುಬಂದಿದೆ.
ನಿವೃತ್ತ ನ್ಯಾಯಮೂರ್ತಿ ಕೆ.ಎಸ್ ರಾಧಕೃಷ್ಣನ್ ನೇತೃತ್ವದ ನ ಸಮಿತಿಯೂ ಯಾವುದೇ ಕಂಪನಿಯೂ ತನ್ನ ಗ್ರಾಹಕರಿಗೆ ದ್ವಿಚಕ್ರ ಮತ್ತು ಇತರೆ ವಾಹನಗಳನ್ನು ಮಾರಾಟ ಮಾಡುವಾಗ ಥರ್ಡ್ ಪಾರ್ಟಿ ವಿಮೆ ಕಡ್ಡಾಯಗೊಳಿಸಬೇಕು. ಅಲ್ಲದೇ ಥರ್ಡ್ ಪಾರ್ಟಿ ವಿಮೆಯನ್ನು ಒಂದು ವರ್ಷದ ಬದಲಿಗೆ, 3 ಮತ್ತು 5 ವರ್ಷಕ್ಕೆ ಮಾಡಿಸಬೇಕು ಎಂದು ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ