ನವದೆಹಲಿ : ಡಿಸೆಂಬರ್ 21 ಹಾಗೂ 26ರಂದು ಬ್ಯಾಂಕ್ ಬಂದ್ ನಡೆಯುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
ಹೌದು. ಡಿ. 21ರಂದು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ಸ್ ಸ್ಕೇಲ್ 4ರ ಅಧಿಕಾರಿಗಳನ್ನು ತೆಗೆಯುವ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಅದನ್ನು ವಿರೋಧಿಸಿ ಬ್ಯಾಂಕ್ ಬಂದ್ ಮಾಡಲು ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್‍ಫೆಡರೇಷನ್(ಎಐಬಿಒಸಿ) ನಿರ್ಧರಿಸಿದೆ.
ಹಾಗೇ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್‍ಗಳನ್ನು ವಿಲೀನ ಮಾಡಲು ಸರ್ಕಾರ ನಿರ್ಧರಿಸರುವುದಕ್ಕೆ ವಿರೋಧ ವ್ಯಕ್ತಪಡಿಸಿ ಡಿ.26 ರಂದು ಬ್ಯಾಂಕ್ ಬಂದ್ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.