ಪಂಜಾಬ್ ಸರಕಾರ ಇನ್ಮುಂದೆ ಸಾಕು ಪ್ರಾಣಿಗಳಿಗೂ ತೆರಿಗೆ ಹೇರಲು ಕರಡು ಸಿದ್ದಪಡಿಸಿದ್ದು, ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ.
ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ನೇತೃತ್ವದ ಸರಕಾರ, ಸಣ್ಣ ಪ್ರಾಣಿಗಳಿಗೆ 250 ರೂಪಾಯಿ ಮತ್ತು ದೊಡ್ಡ ಪ್ರಾಣಿಗಳಿಗೆ 500 ರೂಪಾಯಿ ತೆರಿಗೆ ವಿಧಿಸಲು ನಿರ್ಧರಿಸಿದೆ.
ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕರಡು ಮಸೂದೆ ಮಂಡನೆಯಾಗಲಿದ್ದು, ಒಂದು ವೇಳೆ, ಮಂಡನೆಗೆ ಅನುಮೋದನೆ ದೊರೆತಲ್ಲಿ ಪ್ರಾಣಿಪ್ರಿಯರಿಗೆ ಸಂಕಷ್ಟ ತಂದೊಡ್ಡಲಿದೆ.
ಮನೆಯಲ್ಲಿ ಸಾಕುಪ್ರಾಣಿಗಳನ್ನು ಸಾಕುತ್ತಿರುವವರು ತೆರಿಗೆಯನ್ನು ಪಾವತಿಸಲೇಬೇಕು. ತೆರಿಗೆ ಪಾವತಿಸದಿದ್ದಲ್ಲಿ ದಂಡವನ್ನು ತೆರಬೇಕಾಗುತ್ತದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ಪ್ರಾಣಿ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.