Webdunia - Bharat's app for daily news and videos

Install App

ಸಿನಿಮಾವಾಗಲಿದೆ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣ

Webdunia
ಶುಕ್ರವಾರ, 21 ಜುಲೈ 2023 (16:46 IST)
Photo Courtesy: facebook
ಬೆಂಗಳೂರು: ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈಗ ಸಿನಿಮಾವಾಗಲಿದೆ. ಈ ಬಗ್ಗೆ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ನೋಂದಣಿಯಾಗಿದೆ.
 
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣ ನಡೆದಿದ್ದು 2012 ರಲ್ಲಿ. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ಈಗಾಗಲೇ ಸಿಬಿಐ ಕೋರ್ಟ್ ತೀರ್ಪು ನೀಡಿತ್ತು. ಸೌಜನ್ಯ ಮನೆಯವರೂ ಆತ ಕೊಲೆಗಾರನಲ್ಲ. ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ಕುಟುಂಬಕ್ಕೆ ಆಪ್ತರಾಗಿರುವ ಕೆಲವರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸುತ್ತಲೇ ಬಂದಿದ್ದಾರೆ. ಈ ಘಟನೆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆಯಾಗಿಲ್ಲ ಎಂಬುದು ಸೌಜನ್ಯ ಕುಟುಂಬಸ್ಥರ ಆರೋಪ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸೌಜನ್ಯ ಕುಟುಂಬ ಈಗಲೂ ಕೆಲವು ಸ್ಥಳೀಯ ಸಂಘಟನೆಗಳ ಸಹಾಯದೊಂದಿಗೆ ಹೋರಾಟ ನಡೆಸುತ್ತಿದೆ.

ಇದೀಗ ಇದೇ ಘಟನೆಯಾಧಾರವಾಗಿಟ್ಟುಕೊಂಡು ಜಿ.ಕೆ. ವೆಂಚರ್ಸ್ ಎಂಬ ನಿರ್ಮಾಣ ಸಂಸ್ಥೆ ‘ಸ್ಟೋರಿ ಆಫ್ ಸೌಜನ್ಯ’ ಎಂಬ ಟೈಟಲ್ ನೋಂದಣಿ ಮಾಡಿಸಿಕೊಂಡಿದೆ. ವಿ. ಲವ ಎನ್ನುವವರು ಚಿತ್ರ ನಿರ್ದೇಶನ ಮಾಡಲಿದ್ದಾರೆ. ಪಾತ್ರಧಾರಿಗಳ ಆಯ್ಕೆ ಇನ್ನೂ ನಡೆದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments