Webdunia - Bharat's app for daily news and videos

Install App

ಲೀಲಮ್ಮನಿಗಾಗಿ ವಿನೋದ್‌ರಾಜ್‌ ಕೋಟಿ ವೆಚ್ಚದಲ್ಲಿ ಕಟ್ಟಿದ ಭವ್ಯ ದೇಗುಲ ಲೋಕಾರ್ಪಣೆ

Sampriya
ಗುರುವಾರ, 5 ಡಿಸೆಂಬರ್ 2024 (14:29 IST)
Photo Courtesy X
ಬೆಂಗಳೂರು: ನಟ ವಿನೋದ್‌ ರಾಜ್‌ ಅವರು ಸೋಲದೇವನಹಳ್ಳಿಯಲ್ಲಿ ತಮ್ಮ ತಾಯಿ, ಹಿರಿಯ ನಟಿ ಡಾ.ಲೀಲಾವತಿಗಾಗಿ ನಿರ್ಮಿಸಿದ ಸ್ಮಾರಕವನ್ನು  ಇಂದು ಸಚಿವ ಕೆ.ಎಚ್ ಮುನಿಯಪ್ಪ ಉದ್ಘಾಟಿಸಿದ್ದಾರೆ.  
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.

ಚಲನಚಿತ್ರ ಲೋಕದಲ್ಲಿ ನಕ್ಷತ್ರದಂತೆ ಮಿನುಗಿದ ವರನಟಿ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ.  ಎಪ್ಪತ್ತು ಎಂಭತ್ತರ ದಶಕದಲ್ಲಿ ನಾಯಕ ನಟಿಯಾಗಿ ಬೆಳ್ಳಿತೆರೆಯಲ್ಲಿ ಮಿಂಚಿದ ಡಾ.ಲೀಲಾವತಿ ಅವರು 400ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ, ನೂರಾರು ಪಾತ್ರಗಳಿಗೆ ಜೀವ ತುಂಬಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ(ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು ರಸ್ತೆ) ಒಂದು ಎಕರೆ ಪ್ರದೇಶದಲ್ಲಿ ಭವ್ಯ ದೇಗುಲವಿದ್ದು ಡಾ.ಲೀಲಾವತಿ ಅವಧಿರ ಅಂತ್ಯಕ್ರಿಯೆ ಮಾಡಲಾಗಿರುವ ಸ್ಥಳವನ್ನು ಗರ್ಭಗುಡಿಯಾಗಿಸಲಾಗಿದೆ. ಅಪರೂಪದ ಚಿತ್ರಸಂಪುಟಗಳ ಕಲಾತ್ಮಕವಾದ ಭವ್ಯ ಮಂದಿರದ (ಸಮಾಧಿ) ಒಳ ಆವರಣದ ಸುತ್ತಲೂ ಅಪರೂಪದ 6 2ಚಿತ್ರ ಪಟಗಳನ್ನು ಅಳವಡಿಸಿ ಮಂದಿರದ ಅಂದ ಹೆಚ್ಚಿಸಿದೆ. ಪಕ್ಕದಲ್ಲಿಅಮ್ಮನ ಆಸೆಯಂತೆ ಚಿಕ್ಕ ರಂಗಮಂದಿರ ನಿರ್ಮಿಸಲಾಗಿದೆ. ಸಣ್ಣಪುಟ್ಟ ರಂಗ ಪ್ರದರ್ಶನ, ಸಭೆ ಸಮಾರಂಭಕ್ಕೆ ಇಲ್ಲಿಅವಕಾಶ ಕಲ್ಪಿಸಲಾಗುತ್ತದೆ.

ನಿತ್ಯ ಮಂದಿರ ವೀಕ್ಷಣೆಗೆ ಬರುವವರಿಗಾಗಿ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಮಂದಿರ ತೆರೆದಿರುತ್ತದೆ. ಸುಸಜ್ಜಿತವಾದ ಪಾಕಶಾಲೆ, ಭೋಜನಾಲಯವಿದೆ. ಅಭಿಮಾನದಿಂದ ಅಮ್ಮನ ಮಡಿಲಲ್ಲಿಒಂದೆರಡು ದಿನ ಕಳೆಯಬೇಕೆನ್ನುವವರಿಗೆ ವಸತಿ ವ್ಯವಸ್ಥೆಗಾಗಿ ಅಲ್ಲಿಯೇ ಸುಸಜ್ಜಿತ ಎರಡು ಕೊಠಡಿಗಳನ್ನು ಹಾಗೂ ಉದ್ಯಾನವನವನ್ನು ನಿರ್ಮಿಸಲಾಗುತ್ತಿದೆ. ಸುಮಾರು 1ಕೋಟಿ ರೂ.ಧಿಗೂ ಹೆಚ್ಚು ಹಣದಲ್ಲಿದೇಗುಲ ನಿರ್ಮಾಣ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments