ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮೊಮ್ಮಗಳು, ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಮಗಳು ಆರಾಧ್ಯ ಬಚ್ಚನ್ ಸುಳ್ಳು ಸುದ್ದಿ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾಳೆ.
ಐಶ್ವರ್ಯಾ-ಅಭಿ ದಂಪತಿಯ 11 ವರ್ಷದ ಮಗಳು ಯೂ ಟ್ಯೂಬ್ ಚಾನೆಲ್ ಒಂದು ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕೆ ದೆಹಲಿ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ತಾನು ಅಪ್ರಾಪ್ತೆ ಎಂಬ ಕಾರಣಕ್ಕೆ ಆರೋಗ್ಯದ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹರಡಿಸುತ್ತಿರುವುದು ತನ್ನ ಹಾಗೂ ಕುಟುಂಬದ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದು ಆರಾಧ‍್ಯ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲವು ಬಾರಿ ಆರಾಧ‍್ಯ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದ್ದರು. ಆಕೆ ನಡೆದಾಡುವ ಶೈಲಿಗೂ ಟ್ರೋಲ್ ಗೊಳಗಾಗಿದ್ದಾರೆ. ಇದೀಗ ಸುಳ್ಳು ಸುದ್ದಿಗಳ ಬಗ್ಗೆ ಕಾನೂನು ಸಮರಕ್ಕೆ ಮುಂದಾಗಿದೆ ಬಚ್ಚನ್ ಕುಟುಂಬ.