Webdunia - Bharat's app for daily news and videos

Install App

ಡಯಾಲಿಸಿಸ್ ಚಿಕಿತ್ಸೆ ಅಗ್ಗವಾಗಿ ಸಿಗಲು ಸೌಲಭ್ಯ ಒದಗಿಸಿ: ನಟ ಅನಿರುದ್ಧ್ ಜತ್ಕಾರ್

Webdunia
ಗುರುವಾರ, 8 ಜೂನ್ 2023 (09:55 IST)
ಬೆಂಗಳೂರು: ಸಾಮಾಜಿಕ ಕಳಕಳಿಯ ಕೆಲಸಗಳ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿರುವ ನಟ ಅನಿರುದ್ಧ್ ಜತ್ಕಾರ್ ಇದೀಗ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ರೋಗಿಗಳ ಪರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಚಿಕಿತ್ಸೆಗೊಳಗಾಗುವ ರೋಗಿಗಳ ವೈದ್ಯಕೀಯ ವೆಚ್ಚದ ಹೊರೆ ತಗ್ಗಿಸಲು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೌಲಭ್ಯ ಒದಗಿಸಬೇಕು ಎಂದು ವಿಡಿಯೋ ಮುಖಾಂತರ ನಟ ಅನಿರುದ್ಧ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

‘ಇತ್ತೀಚೆಗಿನ ದಿನಗಳಲ್ಲಿ ಡಯಾಲಿಸಿಸ್ ಚಿಕಿತ್ಸೆಗೊಳಗಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ರೋಗಿಗಳು ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಿಸಲೇಬೇಕಾದ ಪರಿಸ್ಥಿತಿಯಿದೆ. ಇದಕ್ಕಾಗುತ್ತಿರುವ ಖರ್ಚು ದುಬಾರಿ. ಇದರಿಂದಾಗಿ ರೋಗಿಗಳು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಉಚಿತ ಚಿಕಿತ್ಸೆಯಿದೆ. ಆದರೆ ಅದಕ್ಕೆ ತಕ್ಕ ಸೌಲಭ್ಯಗಳು ಅಷ್ಟು ಸರಿ ಇಲ್ಲ. ಹೀಗಾಗಿ ನಾನು ಸರ್ಕಾರಕ್ಕೆ ಈ ಮೂಲಕ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಈ ಬಗ್ಗೆ ಗಮನಹರಿಸಿ. ಇನ್ನು, ಖಾಸಗಿ ಆಸ್ಪತ್ರೆಯಲ್ಲೂ ರಿಯಾಯಿತಿ ದರದಲ್ಲಿ ಈ ಚಿಕಿತ್ಸೆ ಲಭ್ಯವಾಗುವಂತೆ ಕಡ್ಡಾಯವಾದ ನಿಯಮ ಜಾರಿಗೆ ತನ್ನಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments