ಬೆಂಗಳೂರು : ಅರ್ಜುನ್ ಸರ್ಜಾ ಅವರ ವಿರುದ್ದ ಲೈಂಗಿಕ ಕಿರುಕುಳಕ್ಕೆ ಸಂಬಂಧಪಟ್ಟಂತೆ ಅರ್ಜುನ್ ಸರ್ಜಾ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ವಿರುದ್ಧ ದಾಖಲಿಸಿರುವ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ನವೆಂಬರ್ 14 ಕ್ಕೆ ಮುಂದೂಡಿದೆ. ಹಾಗೇ ಇದೇ ವೇಳೆ ಇದು ಮೂರು ವರ್ಷಗಳ ಹಳೆಯ ಪ್ರಕರಣವಾಗಿರುವ ಕಾರಣ ಅರ್ಜುನ್ ಸರ್ಜಾರನ್ನು ಬಂಧಿಸುವ ಅವಶ್ಯಕತೆ ಇಲ್ಲ ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸುವಣತೆ ಸೂಚನೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ