ಬೆಂಗಳೂರು : ಪ್ರಾಣಿಗಳನ್ನು ದತ್ತು ಪಡೆದು ಅವುಗಳ ಪಾಲನೆ ಮಾಡುತ್ತಿರುವ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ಕರ್ನಾಟಕ ಅರಣ್ಯ ಇಲಾಖೆಯ ರಾಯಾಭಾರಿಯಾಗಿ ಆಯ್ಕೆಯಾಗಿದ್ದಾರೆ.
ಹೌದು ನಟ ದರ್ಶನ್ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹುಲಿ, ಆನೆ ಸೇರಿದಂತೆ ನಾನಾ ಪ್ರಾಣಿಗಳನ್ನು ದತ್ತು ಪಡೆದು ಆ ಪ್ರಾಣಿಗಳ ಪಾಲನೆಗೆ ಸಹಕರಿಸಿದ್ದಾರೆ. ಹಾಗೇ ನಗರದ ಹೊರವಲಯದಲ್ಲಿರುವ ಕೆಂಪಯ್ಯನ ಹುಂಡಿಯಲ್ಲಿರುವ ತಮ್ಮ ಫಾರಂ ಹೌಸ್ ನಲ್ಲಿ ಕುದುರೆ ಸೇರಿದಂತೆ ಹಲವಾರು ಪ್ರಾಣಿ ಪಕ್ಷಗಳನ್ನು ಸಾಕುತ್ತಿದ್ದಾರೆ. ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಫಾರಂ ಹೌಸ್ ಗೆ ಆಗಮಿಸುವ ದರ್ಶನ್ ಕುದುರೆ ಸವಾರಿ ಮಾಡಿ ಪ್ರಾಣಿ ಪಕ್ಷಿಗಳ ಜೊತೆ ಕಾಲ ಕಳೆಯುತ್ತಾರೆ.
ಆದಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಕಗೊಳಿಸಿ ಅದಕ್ಕೆ ಸಂಬಂಧಪಟ್ಟ ಪತ್ರವನ್ನು ನೀಡಿದ್ದಾರೆ. ಇನ್ನು ಮುಂದೆ ನಟ ದರ್ಶನ್ ಅವರು ವಿಶ್ವಭೂಮಿ ದಿನಾಚರಣೆ, ಪರಿಸರ ದಿನಾಚರಣೆ, ವನ ಮಹೋತ್ಸವ ಹಾಗೂ ಇನ್ನಿತರ ಅರಣ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅರಣ್ಯ,ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ