Publish Date: Sun, 10 Oct 2021 (08:45 IST)
Updated Date: Sun, 10 Oct 2021 (09:13 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ ರಾತ್ರಿ ಅವರು ನಿಧನರಾದರು.
ಕಳೆದ ಕೆಲವು ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಎರಡು ದಿನಗಳ ಹಿಂದೆ ಆರೋಗ್ಯ ಸ್ಥಿತಿಯಲ್ಲಿ ತೀವ್ರ ಏರುಪೇರಾಗಿದ್ದರಿಂದ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಕೊನೆಯುಸಿರೆಳೆದರು.
ಇನ್ನು, ಅಗಲಿದ ಹಿರಿಯ ನಟನ ಅಂತ್ಯ ಸಂಸ್ಕಾರ ಇಂದು ಮಧ‍್ಯಾಹ್ನದ ಬಳಿಕ ನಡೆಯಲಿದೆ. ಸತ್ಯಜಿತ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ.