Publish Date: Fri, 03 Dec 2021 (09:29 IST)
Updated Date: Fri, 03 Dec 2021 (09:32 IST)
ಬೆಂಗಳೂರು: ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿರುವ ಹಿರಿಯ ನಟ ಶಿವರಾಂ ಕೋಮಾಗೆ ಜಾರಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ.
ಮೆದುಳಿಗೆ ಪೆಟ್ಟಾಗಿದ್ದು, ರಕ್ತ ಹೆಪ್ಪುಗಟ್ಟಿದೆ ಎನ್ನಲಾಗಿದೆ. ವಯಸ್ಸಿನ ಕಾರಣಕ್ಕೆ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲೂ ಸಾಧ‍್ಯವಾಗುತ್ತಿಲ್ಲ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಿನ್ನೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರೂ ಆಸ್ಪತ್ರೆಗೆ ಭೇಟಿ ನೀಡಿದ್ದರು.