ಹೈದರಾಬಾದ್ : ದಕ್ಷಿಣ ಕನ್ನಡದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಅವರು ಗುಟ್ಟಾಗಿ ಮದುವೆಯಾಗಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟಿ ಕಾಜಲ್ ಅಗರ್ ವಾಲ್ ಅವರು ಉದ್ಯಮಿ ಗೌತಮ್ ಕಿಚ್ಲು ಅವರನ್ನು ಮದುವೆಯಾಗಲಿದ್ದು, ಅವರ ಮದುವೆ ಮುಂಬೈ ನಲ್ಲಿ ಲಾಕ್ ಡೌನ್ ಸಮಯದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.
ಎರಡು ದಿನಗಳ ವಿವಾಹ ಸಮಾರಂಭವನ್ನು ಮುಂಬೈನ ಚರ್ಚ್ ಗೇಟ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.