ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಆದರೆ ಅವರು ಹಿಂದೆ ಪ್ರಧಾನಿ ಅವರನ್ನು ಭೇಟಿ ಮಾಡಿದಾಗ ಮಾಡಿದ ತಪ್ಪುಗಳನ್ನು ತಿದ್ದಿಕೊಂಡಿರುವ ಮೂಲಕ ಈಗ ಸುದ್ದಿಯಾಗಿದ್ದಾರೆ.
ಅದೇನೆಂದರೆ ನಟಿ ಪ್ರಿಯಾಂಕಾ ಹಿಂದೊಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ತುಂಡುಡುಗೆ ತೊಟ್ಟು, ಪ್ರಧಾನಿ ಎದುರು ಕಾಲು ಮೇಲೆ ಕಾಲು ಹಾಕಿ ಕುಳಿತುಕೊಂಡಿದ್ದರು. ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಕೆಲವರು ಟ್ರೋಲ್ ಮಾಡಿದ್ದರು.
ಆದ ಕಾರಣ ಈ ಬಾರಿ ಮತ್ತೆ ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡುವಾಗ ನಟಿ ಪ್ರಿಯಾಂಕಾ ಉದ್ದ ತೋಳಿನ ಅನಾರ್ಕಲಿ ಡ್ರೆಸ್ ಧರಿಸುವ ಮೂಲಕ ಸ್ವಲ್ಪವೂ ಅಂಗಾಂಗ ಪ್ರದರ್ಶನ ಮಾಡದೇ ತಮ್ಮ ತಪ್ಪನ್ನು ತಿದ್ದಿಕೊಂಡಿದ್ದಾರೆ. ಜನರಿಗೆ ಆಕ್ಷೇಪಣೆ ಎತ್ತಲು ಅವಕಾಶವನ್ನೇ ಕೊಟ್ಟಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ