Publish Date: Wed, 30 Sep 2020 (15:30 IST)
Updated Date: Wed, 30 Sep 2020 (15:33 IST)
ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ.
ಈ ನಡುವೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಶೆರಾಣಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇಡಿ ಡ್ರಿಲ್ ಮಾಡಿದೆ.
ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ವಿದೇಶಗಳಿಂದ ಡ್ರಗ್ ತರಿಸಿರುವ ಕುರಿತು ಮಹತ್ವದ ದಾಖಲೆಗಳು ತನಿಖಾಧಿಕಾರಿಗಳಿಗೆ ಲಭ್ಯವಾಗಿವೆ ಎನ್ನಲಾಗಿದೆ.
ಡ್ರಗ್ ಲಿಂಕ್ ನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಮಾಹಿತಿ ಕಲೆಹಾಕಿರುವ ಇಡಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ರಾಗಿಣಿ ಹಾಗೂ ಸಂಜನಾರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.